ಕೊಣಾಜೆ : ಸರಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ

Update: 2016-12-17 11:34 GMT

ಕೊಣಾಜೆ , ಡಿ. 17 : ಭಾಷೆ ಒಂದು ಮಾಧ್ಯಮ ಅಷ್ಟೆ. ಶಿಕ್ಷಣ ಪಡೆಯುವ ಮಾಧ್ಯಮ ಆಂಗ್ಲ ಅಥವಾ ಕನ್ನಡ ಆದರೂ , ಸಂಸ್ಕಾರಯುತ ಜ್ಞಾನಾರ್ಜನೆ ಮುಖ್ಯವಾಗುತ್ತದೆ. ಆದ್ದರಿಂದ ಸರಕಾರಿ ಶಾಲೆ ಎಂಬ ನಿರ್ಲಕ್ಷ ಭಾವವನ್ನು ತೊಡೆದುಹಾಕಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದ ಸಂಪತ್ತಾಗಿ ರೂಪಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ.ಕಿಶೋರ್ ಕುಮಾರ್ ಅವರು ಅಭಿಪ್ರಾಯಪಟ್ಟರು.

  
ಅವರು ಶುಕ್ರವಾರ ಕೊಣಾಜೆ ಪದವು ದ.ಕ.ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸರಕಾರಿ ಶಾಲೆಗಳಲ್ಲಿ  ಸಿಇಟಿ ಬರೆದು ಅರ್ಹತೆ ಹೊಂದಿದ ಪರಿಣಿತ ಶಿಕ್ಷಕರೇ ವಿದ್ಯಾರ್ಥಿಗಳಿಗೆ ಪಾಠ ಮಾಡಿದರೆ ಖಾಸಗಿ ಶಾಲೆಗಳಲ್ಲಿ ಈ ರೀತಿಯ ವ್ಯವಸ್ಥೆ ಇರುವುದಿಲ್ಲ. ಆದರೆ ವಿದ್ಯಾರ್ಥಿಗಳಿಗೆ ಪಾಠ ಮಾಡುವಲ್ಲಿ ಶಿಕ್ಷಕರಿಗೆ ತಮ್ಮದೇ ಆದ ಮಾನದಂಡ ವಿರುತ್ತದೆ ಮಾತ್ರವಲ್ಲದೆ ಅವರಿಗೆ ಶಿಕ್ಷಕರಿಗೆ ಪೋಷಕರು ಅನಗತ್ಯ ಹಸ್ತಕ್ಷೇಪ ಮಾಡದೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಬೇಕು. ಅದರಲ್ಲೂ ಪ್ರಾಥಮಿಕ ಶಿಕ್ಷಣ ಎಂಬುದು ಒಬ್ಬ ವ್ಯಕ್ತಿಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಮಹಮ್ಮದ್ ಮೋನು ಅವರು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಮೇಲ್ಚಾವಣಿ ನಿರ್ಮಾಣದಲ್ಲಿ ಸಹಕಾರ ನೀಡಿದ ಸಮಾಜಸೇವಕ ಪ್ರಸಾದ್ ರೈ ಕಲ್ಲಿಮಾರ್ ಹಾಗೂ ವಿಜಯಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹರೇಕಳ ರಾಮಕೃಷ್ಣ ಪ್ರೌಡಶಾಲೆ ಮುಖ್ಯೋಪಾಧ್ಯಾಯರಾದ ರವೀಂದ್ರ ರೈ ಹರೇಕಳ, ಉದ್ಯಮಿ ಕೆ.ಕೆ.ನಾಸೀರ್, ಪಂಚಾಯಿತಿ ಸದಸ್ಯರಾದ ಅಚ್ಯುತ ಗಟ್ಟಿ, ಮುತ್ತು ಶೆಟ್ಟಿ, ವೇದಾವತಿ ಗಟ್ಟಿ, ಮಂಗಳಾ ಗ್ರಾಮೀಣ ಯುವಕ ಸಂಘದ ಎ.ಕೆ.ರಹಿಮಾನ್ ಕೋಡಿಜಾಲ್, ಕ್ಷೇತ್ರಸಂಪನ್ಮೂಲ ಇಲಾಖೆಯ ಗೀತಾ, ಶಿಕ್ಷಕರಾದ ಜಗದೀಶ್ ಶೆಟ್ಟಿ, ರಾಧಾಕೃಷ್ಣ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧಾ ಕೂಟದಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News