ಹಕ್ಕುಗಳ ಅರಿವಾದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ: ಸಿದ್ದರಾಮಯ್ಯ

Update: 2016-12-18 09:12 GMT

ಬೆಂಗಳೂರು, ಡಿ.18: ಅಲ್ಪಸಂಖ್ಯಾತರು ನಮ್ಮ ದೇಶದಲ್ಲಿ ಅಷ್ಟೇ ಇಲ್ಲ. ಉಳಿದ ದೇಶಗಳಲ್ಲಿಯೂ ಮತೀಯ ಮತ್ತು ಭಾಷಾ ಅಲ್ಪಸಂಖ್ಯಾಕರು ಇದ್ದಾರೆ. ಅಲ್ಪಸಂಖ್ಯಾತರು ಎಂಬುದಕ್ಕೆ ನಿರ್ದಿಷ್ಟವಾದ ಅರ್ಥವಿಲ್ಲ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಒಂದೊಂದು ರೀತಿ ವ್ಯಾಖ್ಯಾನ ಮಾಡಿವೆ. ಅಲ್ಪಸಂಖ್ಯಾತರ ಹಕ್ಕುಗಳ ಅರಿವು ಎಲ್ಲ ಅಲ್ಪಸಂಖ್ಯಾತರಿಗೂ ಆಗಬೇಕಾಗಿದೆ. ಹಕ್ಕುಗಳ ಅರಿವಾದಾಗ ಮಾತ್ರ ಸದೃಢ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದಿಂದ ಆಯೋಜಿಸಿದ್ದ ಅಲ್ಪಸಂಖ್ಯಾತರ ಹಕ್ಕು ದಿನಾಚರಣೆ  ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ದೇಶದಲ್ಲಿ 20.2% ಅಲ್ಪಸಂಖ್ಯಾತರಿದ್ದು, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಆಗಬೇಕು. ಸರಕಾರ ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧವಾಗಿದ್ದೇವೆ. ರಾಜ್ಯದಲ್ಲಿ ಯಾರಿಗೂ ಕೂಡಾ ನಮಗೆ ರಕ್ಷಣೆಯಿಲ್ಲ ಎಂಬ ಭಾವನೆ ಬರಕೂಡದು ನಾವು ಎಲ್ಲ ವರ್ಗದ ಪರವಾಗಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಪರಮೇಶ್ವರ್, ಆರೋಗ್ಯ ಸಚಿವ ರಮೇಶ್ ಕುಮಾರ್, ಆಹಾರ ಸಚಿವ ಯು.ಟಿ.ಖಾದರ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮತ್ತಿತರ ಮುಖಂಡರುಗಳು ಉಪಸ್ಥಿತರಿದ್ದರು.                      

                     
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News