ನೋಟು ರದ್ದತಿ: ದುಷ್ಪರಿಣಾಮಗಳ ಅಧ್ಯಯನ ಸಮಿತಿ ಸದಸ್ಯರಾಗಿ ಡಿಕೆಶಿ
Update: 2016-12-28 05:43 GMT
ಬೆಂಗಳೂರು, ಡಿ.28: ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ರನ್ನು ಕಾಂಗ್ರೆಸ್ ಪಕ್ಷವು ನೋಟು ರದ್ದತಿ ಪ್ರಕ್ರಿಯೆಯಿಂದ ರಾಷ್ಟ್ರದ ಜನಸಮುದಾಯದ ಮೇಲೆ ಆಗಿರುವ ದುಷ್ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ರಚಿಸಿರುವ ರಾಷ್ಟ್ರಮಟ್ಟದ ಅಧ್ಯಯನ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿದೆ.
ಶಿವಕುಮಾರ್ ರವರು ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ, ಲಕ್ಷದ್ವೀಪ ಹಾಗೂ ಪಾಂಡಿಚೇರಿ ರಾಜ್ಯಗಳಲ್ಲಿ ಕೇಂದ್ರ ಸರಕಾರದ ವಿರುದ್ದ ಜನಜಾಗೃತಿ ಸಭೆಗಳನ್ನು ಆಯೋಜಿಸುವ ಜವಾಬ್ದಾರಿಗಳನ್ನು ನೀಡಲಾಗಿದೆ.