ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬಿಜೆಪಿಗೆ ಸೇರ್ಪಡೆ
Update: 2017-01-02 09:09 GMT
ಬೆಂಗಳೂರು, ಜ.2: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಇ೦ದು ಭಾರತೀಯ ಜನತಾ ಪಾರ್ಟಿಗೆ ಅಧಿಕೃತವಾಗಿ ಸೇರ್ಪಡೆಗೊ೦ಡರು. ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ಎಸ್.ಯಡಿಯೂರಪ್ಪನವರು ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊ೦ಡರು.
ಶ್ರೀನಿವಾಸ ಪ್ರಸಾದ್ ಜತೆಗೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮೋಹನ್ ಮತ್ತು ಬಸವೇಗೌಡ ,ಶ್ರೀನಿವಾಸ ಪ್ರಸಾದ್ ಸಹೋದರ ರಾಮಸ್ವಾಮಿಮತ್ತಿತರರು ಬಿಜೆಪಿಗೆ ಸೇರ್ಪಡೆಗೊಂಡರು.
.