ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರದಾನ

Update: 2017-01-15 20:48 IST
ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರದಾನ
  • whatsapp icon

ಉಡುಪಿ, ಜ.15: ಉಡುಪಿ ತುಳುಕೂಟದ ವತಿಯಿಂದ ಕೆಮ್ತೂರು ತುಳು ನಾಟಕ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ರವಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿತು.

ಮುಖ್ಯ ಅತಿಥಿಗಳಾದ ಮಾಜಿ ಶಾಸಕ ರಘುಪತಿ ಭಟ್, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಯು.ಧರ್ಮಪಾಲ ದೇವಾಡಿಗ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಆಡಳಿತ ಮತ್ತು ಸೇವಾ ಟ್ರಸ್ಟ್‌ನ ಅಧ್ಯಕ್ಷ ಕಡಂದಲೆ ಸುರೇಶ್ ಭಂಡಾರಿ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಕಾಲೇಜಿನ ಪ್ರಾಂಶು ಪಾಲೆ ಪ್ರೊ.ಕುಸುಮಾ ಕಾಮತ್ ವಿಜೇತರಿಗೆ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣಿಪಾಲ ವಿವಿಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅವರನ್ನು ಸನ್ಮಾನಿಸ ಲಾಯಿತು. ಅಧ್ಯಕ್ಷತೆಯನ್ನು ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಗೌರವಾಧ್ಯಕ್ಷ ಡಾ.ಭಾಸ್ಕರಾನಂದ ಕುಮಾರ್, ಕೋಶಾಧಿಕಾರಿ ಎಂ.ಜಿ.ಚೈತನ್ಯ, ಅಶೋಕ್ ಬಿ. ಶೆಟ್ಟಿ ಉಪಸ್ಥಿತರಿದ್ದರು.

ನಾಟಕ ಸ್ಫರ್ಧೆಯ ಸಂಚಾಲಕ ಬಿ.ಪ್ರಭಾಕರ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೋಹನ್ ಶೆಟ್ಟಿ ನಿಡಂಬೂರು ಸ್ವಾಗತಿಸಿದರು. ಕಾರ್ಯ ದರ್ಶಿ ಗಂಗಾಧರ ಕಿದಿಯೂರು ವಂದಿಸಿದರು. ಯಾದವ ಕರ್ಕೇರ ಕಾರ್ಯ ಕ್ರಮ ನಿರೂಪಿಸಿದರು. ಸ್ಪರ್ಧೆಯಲ್ಲಿ ಕೆಮ್ತೂರು ತುಳು ನಾಟಕ ಪ್ರಶಸ್ತಿ ಪಡೆದ ಮಣಿಪಾಲ ಸಂಗಮ ಕಲಾವಿದೆರ್ ತಂಡದ ‘ವಾಲಿ ವಧೆ’ ನಾಟತ ಮರು ಪ್ರದರ್ಶನ ಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News