ಲಸಿಕೆಗೆ ಸಹಕಾರ ನೀಡದ ಶಾಲೆಗಳ ವಿರುದ್ಧ ಕ್ರಮ: ಸಚಿವ ತನ್ವೀರ್ ಸೇಠ್
ಬೆಂಗಳೂರು, ಫೆ.7: ರಾಜ್ಯದಲ್ಲಿ 1 ಕೋಟಿ 16 ಲಕ್ಷ ಮಕ್ಕಳಿಗೆ ದಡಾರ ರುಬೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ , ಶಾಲೆಗಳಲ್ಲಿ ವೈದ್ಯರು ಲಸಿಕೆ ನೀಡಲಾಗುವುದು. ರುಬೆಲ್ಲಾ ಲಸಿಕೆಗೆ ಸಹಕಾರ ನೀಡದ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಕುಮಾರ ಕೃಪಾ ರಸ್ತೆಯಲ್ಲಿರುವ ಭಾರತ ಸೇವಾದಳ ಶಾಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕಾ ಕಾಯ೯ಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಲಸಿಕೆಗೆ ಸಹಕಾರ ನೀಡದ ಖಾಸಗಿ ಶಾಲೆಗಳ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಅದಕ್ಕೂ ಒಪ್ಪದಿದ್ದಲ್ಲಿ ನೋಟಿಸ್ ಕಳುಹಿಸುವುದಾಗಿ ಅವರು ಎಚ್ಚರಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದಿನಿಂದ ಲಸಿಕೆ ಹಾಕುವ ಕಾಯ೯ಕ್ರಮ ಆರಂಭವಾಗಲಿದ್ದು, ಇದೇ ಸಮಯದಲ್ಲಿ ಮಕ್ಕಳಿಗೆ ಹೆಲ್ತ್ ಕಾಡ್೯ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.