ಭೀಕರ ಅಪಘಾತ ; ಮೈಸೂರು ಲೋಕಾಯುಕ್ತ ಎಸ್ಪಿ ಸಾವು
Update: 2017-02-23 13:58 GMT
ಬೆಂಗಳೂರು,ಫೆ.22: ಕೆಂಗೇರಿ ಸಮೀಪದ ಕುಂಬಳಗೂಡುವಿನಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ ರವಿಕುಮಾರ್ ಹಾಗೂ ಕಾರು ಚಾಲಕ ಕಿರಣ್ ಸಾವಿಗೀಡಾಗಿದ್ದಾರೆ.
ಬುಧವಾರ ರಾತ್ರಿ 8:30 ಸುಮಾರಿಗೆ ಲೋಕಾಯುಕ್ತ ಎಸ್ಪಿ ರವಿಕುಮಾರ್ ತೆರಳುತ್ತಿದ್ದ ಓಅ 01, ಎ- 5856 ಸಂಖ್ಯೆಯ ಕಾರು ರಾಮೋಹಳ್ಳಿ ಗೇಟ್ ಬಳಿ ರಸ್ತೆ ಡಿವೈಡರ್‌ಗೆ ಗುದ್ದಿದೆ. ಈ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಟಿಪ್ಪರ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಎಸ್ಪಿ ಗಂಭೀರವಾಗಿ ಗಾಯಗೊಂಡಿದ್ದರು.
ಬಳಿಕ ಸ್ಥಳೀಯರ ಸಹಾಯದಿಂದ ಎಸ್ಪಿ ರವಿಕುಮಾರ್ ಅವರನ್ನು ಹತ್ತಿರದ ರಾಜ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.