​ಪಂಚರಾಜ್ಯ ಚುನಾವಣಾ ಫಲಿತಾಂಶ ಬಿಜೆಪಿಗೆ ತಕ್ಕ ಪಾಠವಾಗಲಿದೆ: ಸಚಿವ ಎಚ್.ಕೆ.ಪಾಟೀಲ್

Update: 2017-03-10 05:07 GMT

ಹುಬ್ಬಳ್ಳಿ, ಮಾ.10: ಪಂಚ ರಾಜ್ಯ ಚುನಾವಣೆಯ ಫಲಿತಾಂಶವು ಬಿಜೆಪಿಗೆ ಪಕ್ಕ ಪಾಠವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆ ಪ್ರಕಾರ ಪಂಚರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾನೆ. ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂಬ ಹೇಳಿಕೆ ಸಂವಿಧಾನ ವಿರೋಧಿ ವಿಚಾರ. ಒಂದು ರಾಷ್ಟ್ರೀಯ ಪಕ್ಷ ಈ ರೀತಿ ವಿಚಾರ ಮಾಡುವುದು ಸರಿಯಾದ ಕ್ರಮವಲ್ಲ. ಮೋದಿ ತನ್ನನ್ನು ಇಂದಿರಾ ಗಾಂಧಿ ಎಂದು ತಿಳಿದಿದ್ದಾರೆ. ಮಾದ್ಯಮಗಳ ಮೂಲಕ ತನ್ನನ್ನು ಇಂದಿರಾ ಗಾಂಧಿಗೆ ಹೋಲಿಸಿಕೊಂಡಿದ್ದಾರೆ. ಅದು ಅವರ ತಪ್ಪುಕಲ್ಪನೆ. ಅವರಿಗೆ ಮತದಾರರು ಈ ಚನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಕೆಲ ಸಮೀಕ್ಷೆಗಳ ಪ್ರಕಾರ ಪಂಚ ರಾಜ್ಯಗಳಲ್ಲಿ ಬಿಜೆಪಿಗೆ ಹಿನ್ನಡೆ ಆಗಿದೆ. ಇನ್ನು ಚುನಾವಣಾ ಫಲಿತಾಂಶ ಪ್ರಕಟಗೊಂಡರೆ ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತದ ಕನಸು ಕನಸಾಗಿಯೇ ಉಳಿಯಲಿದೆ ಎಂದರು ವ್ಯಂಗ್ಯವಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News