ರಾಷ್ಟ್ರ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Update: 2017-04-12 13:48 GMT

ಬೆಂಗಳೂರು,ಎ.12: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸೇವೆಯನ್ನು ಗುರುತಿಸಿ "ರಾಜೀವ್‌ಗಾಂಧಿ ಮಾನವ ಸೇವಾ ಪ್ರಶಸ್ತಿ" ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇವರಿಂದ ಅರ್ಜಿ ಆಹ್ವಾನಿಸಿದೆ.

ವ್ಯಕ್ತಿ ಪ್ರಶಸ್ತಿ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷ ಸೇವೆ ಸಲ್ಲಿಸಿದ 3 ವ್ಯಕ್ತಿಗಳಿಗೆ ತಲಾ 1 ಲಕ್ಷ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.

ಸಂಸ್ಥೆಗಳ ಸೇವೆಗೆ ಪ್ರಶಸ್ತಿ: ಐದು ಸಂಸ್ಥೆಗಳಿಗೆ ತಲಾ 3 ಲಕ್ಷ ರೂ.ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

2017ನೆ ಸಾಲಿಗೆ ಪ್ರಶಸ್ತಿಗಾಗಿ ನಗರದ ಹೊಸೂರು ರಸ್ತೆಯಲ್ಲಿರುವ ಧರ್ಮಾರಾಂ ಕಾಲೇಜು ಸಮೀಪದ ಸುಧಾರಣಾ ಸಂಸ್ಥೆಗಳ ಸಂಕೀರ್ಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ನಿಗದಿ ಪಡಿಸಿರುವ ಅರ್ಜಿ ನಮೂನೆಗಳನ್ನು  ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಮೇ.15 ರೊಳಗೆ ಸಲ್ಲಿಸುವಂತೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಗರ ಜಿಲ್ಲೆಯ ದೂ.26578688 ಅನ್ನು ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News