ಶ್ರೀನಿವಾಸ ಪ್ರಸಾದ್ ರ ಸೋಲನ್ನು ನಿರೀಕ್ಷಿಸಿರಲಿಲ್ಲ: ಯಡಿಯೂರಪ್ಪ ಪ್ರತಿಕ್ರಿಯೆ
Update: 2017-04-13 06:14 GMT
ಬೆಂಗಳೂರು, ಎ.13: ಗುಂಡ್ಲುಪೇಟೆ ಮತ್ತು ನಂಜನಗೂಡಿನ ಉಪ ಚುನಾವಣೆಯಲ್ಲಿ ಸೋಲನ್ನು ನಿರೀಕ್ಷಿಸಿರಲಿಲ್ಲ. ಶ್ರೀನಿವಾಸ ಪ್ರಸಾದ್ ಅವರಂತಹ ಹಿರಿಯ ನಾಯಕರ ಸೋಲನ್ನು ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ಸೋಲನುಭವಿಸಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಮತದಾರರ ತೀರ್ಪನ್ನು ಗೌರವಿಸುವೆ. ಉಪ ಚುನಾವಣೆಯಲ್ಲಿ ಆಡಳಿತ ಪಕ್ಷ ಗೆದ್ದಿದ್ದು, ನಮ್ಮ ನಿರೀಕ್ಷೆಗೆ ಹಿನ್ನಡೆಯಾಗಿದೆ. ನಮ್ಮ ಸೋಲಿನ ಕಾರಣಗಳನ್ನು ಪರಾಮರ್ಶಿಸುತ್ತೇವೆ ಎಂದರು.
ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ಹಿನ್ನಡೆಯಾಗಿರುವುದು ಅತೀವ ನೋವು ತಂದಿದ್ದು, ಉಪಚುನಾವಣೆಯ ಸೋಲು 2018ರ ವಿಧಾನಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.