ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಆರೋಪಿಗಳ ಅರ್ಜಿ ವಜಾಗೊಳಿಸಿದ ಸಿಬಿಐ ವಿಶೇಷ ಕೋರ್ಟ್

Update: 2017-04-17 17:00 GMT

ಬೆಂಗಳೂರು, ಎ.17: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ಆರೋಪದಿಂದ ಕೈಬಿಡುವಂತೆ ಆನಂದ್‌ಸಿಂಗ್, ಸತೀಶ್ ಸೈಲ್, ನಾಗೇಂದ್ರ ಸೇರಿ ಇತರರು ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೂರು ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಆನಂದ್‌ಸಿಂಗ್, ಸತೀಶ್ ಸೈಲ್, ನಾಗೇಂದ್ರ ಸೇರಿ ಇನ್ನಿತರರು ಈ ಪ್ರಕರಣದ ಆರೋಪದಿಂದ ಕೈಬಿಡುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಈ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News