ಆಟೊದಲ್ಲಿದ್ದ 70 ಕೆ.ಜಿ. ಗಾಂಜಾ ವಶ
Update: 2017-04-23 18:22 GMT
ಬೆಂಗಳೂರು, ಎ.23: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಹೊಸಕೋಟೆ ಗ್ರಾಮಾಂತರ ಠಾಣಾ ಪೊಲೀಸರು ಆಟೊದಲ್ಲಿದ್ದ 70 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರಮೂಲದ ಮಂಜುನಾಥ್(45) ಬಂಧಿತ ಆರೋಪಿ ಎನ್ನಲಾಗಿದೆ. ಮಂಜುನಾಥ್ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಆಟೊದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಹೊಸಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.