ಕಾಶ್ಮೀರ: ಇಂಟರ್‌ನೆಟ್ ಸೇವೆ ಸ್ಥಗಿತಕ್ಕೆ ಸೂಚನೆ

Update: 2017-04-26 13:03 GMT

ಶ್ರೀನಗರ, ಎ.26: ಗಲಭೆಪೀಡಿತ ಕಾಶ್ಮೀರ ಕಣಿವೆಯಲ್ಲಿ ಒಂದು ತಿಂಗಳಾವಧಿಗೆ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿುವಂತೆ ರಾಜ್ಯ ಸರಕಾರ ಆದೇಶಿಸಿದೆ.

 ಭಾರತೀಯ ಟೆಲಿಗ್ರಾಫ್ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ರಾಜ್ಯ ಸರಕಾರಕ್ಕೆ ನೀಡಲಾಗಿರುವ ಅಧಿಕಾರವನ್ನು ಬಳಸಿಕೊಂಡು ಇಂಟರ್‌ನೆಟ್ ಸೇವೆಯನ್ನು ಒಂದು ತಿಂಗಳಾವಧಿಗೆ ಅಥವಾ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ರಾಜ್ಯದ ಗೃಹ ಸಚಿವಾಲಯ ತಿಳಿಸಿದೆ. ಈ ಆದೇಶ ಎಲ್ಲಾ ಇಂಟರ್‌ನೆಟ್ ಸೇವೆಗೂ ಅನ್ವಯಿಸುತ್ತದೆಯೋ ಅಥವಾ ಮೊಬೈಲ್ ಇಂಟರ್‌ನೆಟ್ ವ್ಯವಸ್ಥೆಗೆ ಮಾತ್ರವೇ ಎನ್ನುವುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿಲ್ಲ. ಎಪ್ರಿಲ್ 17ರಿಂದ ಕಾಶ್ಮೀರದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುವ ಕೆಲವು ದೃಶ್ಯಾವಳಿ ಮತ್ತು ಸಂದೇಶಗಳು ರಾಜ್ಯದಲ್ಲಿ ಶಾಂತಿ ಕದಡಲು ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News