ದಿಲ್ಲಿಯಲ್ಲಿ ಬಸವ ಜಯಂತಿ ಆಚರಣೆ

Update: 2017-04-29 07:03 GMT

ಹೊಸದಿಲ್ಲಿ, ಎ.29: ರಾಜಧಾನಿಯ ವಿಜ್ಞಾನ ಭವನದಲ್ಲಿ ಶನಿವಾರ ಭಕ್ತಿ ಭಂಡಾರಿ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು.

ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಪ್ರಧಾನಮಂತ್ರಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತಕುಮಾರ್, ಡಿವಿ ಸದಾನಂದ ಗೌಡ, ರಮೇಶ್ ಜಿಗಜಿಣಗಿ, ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕಾರ್ಯಕ್ರಮದ ರೂವಾರಿ ಅರವಿಂದ್ ಜತ್ತಿ ಅವರು ಉಪಸ್ಥಿತರಿದ್ದರು.

ಬಸವಣ್ಣ ಸೇರಿದಂತೆ 173 ಶರಣರ 2,500 ವಚನಗಳು 23 ಭಾಷೆಗಳಿಗೆ ಭಾಷಾಂತರಿಸಲಾಗಿದ್ದು, ಭಾಷಾಂತರ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಲಾಯಿತು. 

   ಬಸವ ಸ್ಮರಣೆಯೊಂದಿಗೆ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಬಸವೇಶ್ವರ ಸಂದೇಶವನ್ನು ಜಗತ್ತಿನ ಮೂಲೆ ಮೂಲೆಗೆ ತಲುಪಿಸುವ ಅಗತ್ಯವಿದೆ. ಅರವಿಂದ ಜತ್ತಿ ರಾಜಕಾರಣಿಗಳ ಕುಟುಂಬಕ್ಕೆ ಮಾದರಿಯಾಗಿದ್ದಾರೆ. ಭಾರತದ್ದು ಗುಲಾಮಗಿರಿಯ ಇತಿಹಾಸವಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News