ಮೇ 2-4: ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ

Update: 2017-05-01 16:13 GMT

ಪುತ್ತೂರು, ಮೇ 1: ಸಾಲ್ಮರದಲ್ಲಿರುವ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಬೆಳ್ಳಿ ಹಬ್ಬ, ನೂತನ ಶರೀಅತ್ ಮತ್ತು ಪದವಿ ಪೂರ್ವ ಕಾಲೇಜು ಶಿಲಾನ್ಯಾಸ, ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಸನ್ಮಾನ ಸಮಾರಂಭ ಮೇ 2ರಿಂದ 4ರ ತನಕ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಮುಹಮ್ಮದ್ ಸಾಬ್ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೇ 2ರಂದು ಟ್ರಸ್ಟ್‌ನ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಧ್ವಜಾರೋಹಣದ ಮೂಲಕ ಬೆಳ್ಳಿ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.

ಬಳಿಕ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ನಡೆಯಲಿದೆ. ಮೇ 3ರಂದು ವಸ್ತು ಪ್ರದರ್ಶನವನ್ನು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್ ಉದ್ಘಾಟಿಸಲಿದ್ದಾರೆ. ಬಳಿಕ ಸಂಜೆ ನಡೆಯುವ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಖತೀಬ್ ಎಸ್.ಬಿ. ಮುಹಮ್ಮದ್ ದಾರಿಮಿ ದುಆ ನಡೆಸಲಿದ್ದಾರೆ. ಶಾಸಕಿ ಶಕುಂತಳಾ ಶೆಟ್ಟಿ ಉದ್ಘಾಟಿಸಲಿದ್ದಾರೆ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುತ್ತೂರು ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಲರಾಮ ಆಚಾರ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಉದ್ಯಮಿ ಮುಹಮ್ಮದ್ ಇಬ್ರಾಹಿಂ ಪಾವೂರ್, ಕೆಐಸಿ ಶಾರ್ಜಾ ಅಧ್ಯಕ್ಷ ಅಬ್ದುಲ್ ಖಾದರ್ ಬೈತಡ್ಕ ಬಾಗವಹಿಸಲಿದ್ದಾರೆ. ಮಂಗಳೂರು ಸೆಂಟ್ರಲ್ ಕಮಿಟಿ ಅದ್ಯಕ್ಷ ಮುಹಮ್ಮದ್ ಮಸೂದ್ ಸಾಧಕರನ್ನು ಸನ್ಮಾನಿಸಲಿದ್ದಾರೆ ಎಂದರು.

ಮೇ 4ರಂದು ನೂತನ ಮಹಿಳಾ ಶರಿಅತ್ ಮತ್ತು ಪದವಿ ಪೂರ್ವ ಕಾಲೇಜ್‌ಗೆ ಸೈಯದ್ ಹೈದರ್ ಅಲಿ ಶಿಹಾಬ್ ತಂಙಳ್ ಶಿಲಾನ್ಯಾಸ ಮಾಡಲಿದ್ದಾರೆ. ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನ್ಸಾರುದ್ದೀನ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ವಹಿಸಲಿದ್ದಾರೆ. ಪುತ್ತೂರು ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಸೈಯದ್ ಅಹಮ್ಮದ್ ಪೂಕೋಯ ತಂಙಳ್ ದುಆ ನಡೆಸಲಿದ್ದಾರೆ. ರಾಜ್ಯ ಅರಣ್ಯ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದಾರೆ. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ನೂತನ ಶಾಲಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಖಾಝಿ ತ್ವಾಖಾ ಅಹಮ್ಮದ್ ಮುಸ್ಲಿಯಾರ್ ನೂತನ ಕಚೇರಿ ಉದ್ಘಾಟಿಸಲಿದ್ದಾರೆ.

ಸೈಯದ್ ಅಲಿ ತಂಙಳ್ ಕುಂಬೋಳ್ ನೂತನ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಲಿದ್ದಾರೆ. ಬ್ಯಾರಿ ಅಕಾಡಮಿ ಅಧ್ಯಕ್ಷ ಸೈಯದ್ ಮಹಮ್ಮದ್ ಬ್ಯಾರಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಹೈದರ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್, ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಯ್ದೀನ್, ಕಾಪು ಶಾಸಕ ವಿನಯ ಕುಮಾರ್ ಸೊರಕೆ ಸನ್ಮಾನ ನೆರವೇರಿಸಲಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಿರಝ್ವೆನ್ ಅರ್ಶದ್ ಬಹುಮಾನ ವಿತರಣೆ ಮಾಡಲಿದ್ದಾರೆ.

ಮೂಡಿಗೆರೆ ಖಾಝಿ ಎಂ.ಎ.ಖಾಸಿಂ ಮುಸ್ಲಿಯಾರ್, ಮಂಗಳೂರಿನ ಶಾಸಕ ಜೆ. ಆರ್. ಲೋಬೊ, ಕೇರಳದ ಎಸ್‌ವೈಎಸ್ ಮಾಜಿ ಕಾರ್ಯದರ್ಶಿ ಮೌಲಾನಾ ಸಿ.ಕೆ. ಕೆ. ಮಣಿಯಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್, ಟ್ರಸ್ಟಿಗಳಾದ ಅಬ್ದುಲ್ ರಹಿಮಾನ್ ಅಝಾದ್, ಎಲ್.ಟಿ. ಅಬ್ದುರ್ರಝಾಕ್, ಸಹಶಿಕ್ಷಕ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News