ಜಾಗತಿಕ ಮಟ್ಟದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ಡಾ.ಎಚ್.ಸಿ.ಮಹದೇವಪ್ಪ

Update: 2017-05-17 15:56 GMT

ಬೆಂಗಳೂರು, ಮೇ 17: ಜಾಗತಿಕ ಮಟ್ಟದಲ್ಲಿ ಜುಲೈ 23 ರಿಂದ ಮೂರು ದಿನಗಳ ಕಾಲ ‘ಸಂವಿಧಾನಶಿಲ್ಪಿ’ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

‘ಡಾ.ಬಿ.ಆರ್.ಅಂಬೇಡ್ಕರ್‌ರವರ 126ನೆ ಜಯಂತಿ ಅಂಗವಾಗಿ ಅಂತಾರಾಷ್ಟ್ರೀಯ ಸಮ್ಮೇಳನ’ ಆಯೋಜಿಸುವ ಕುರಿತು ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಉನ್ನತ ಸಮಿತಿ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ಆಯೋಜಿಸಲು ನಿರ್ಧರಿಸಿರುವ ಅಂಬೇಡ್ಕರ್ ಜಯಂತಿಗೆ ರಾಜ್ಯ ಸರಕಾರವು 8 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಈ ಕಾರ್ಯಕ್ರಮಕ್ಕೆ 150 ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮಹದೇವಪ್ಪ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಚಲನಚಿತ್ರವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಸಿಲ್ಲ ಎಂದು ಅವರು ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News