ಮೇ 22: ನೂರು ಕವಿಗಳ ಪ್ರಥಮ ಬ್ಯಾರಿ ಕಾವ್ಯ ಸಂಪುಟ ಬಿಡುಗಡೆ

Update: 2017-05-19 05:53 GMT

ಮಂಗಳೂರು, ಮೇ 19: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಸಂಪಾದಿಸಿ ಪ್ರಕಟಿಸಿದ, ಬಶೀರ್ ಅಹ್ಮದ್ ಕಿನ್ಯಾ ಸಂಪಾದಕತ್ವದ ನೂರು ಕವಿಗಳ ಪ್ರಥಮ ಬ್ಯಾರಿ ಕಾವ್ಯ ಸಂಪುಟ ಪುಸ್ತಕ ಬಿಡುಗಡೆ ಕಾರ್ಯಕ್ರಮ  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ಮೇ 22ರಂದು ಸಂಜೆ 4 ಗಂಟೆಗೆ ಹಂಪನಕಟ್ಟೆಯ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ನಡೆಯಲಿದೆ.

ಅರಣ್ಯ, ಪರಿಸರ ಜೀವಶಾಸ್ತ್ರ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪುಸ್ತಕ ಬಿಡುಗಡೆ ಮಾಡಲಿದ್ದು, ಶಾಸಕ ಜೆ. ಆರ್. ಲೋಬೊ ಪುಸ್ತಕ ಸ್ವೀಕರಿಸಲಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎ. ಮೊಯ್ದಿನ್ ಬಾವ ಬ್ಯಾರಿ ಕವಿಗಳನ್ನು ಅಭಿನಂದಿಸಲಿದ್ದಾರೆ.

ಅಕಾಡಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹಿದಿನ್, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷೆ ಜಾನಕಿ ಎಂ. ಬ್ರಹ್ಮಾವರ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್, ದ.ಕ.ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಂ.ಆರ್. ರವಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮುಹಮ್ಮದ್ ನಝೀರ್, ಸಾಹಿತಿ ಬಿ.ಎ. ಮುಹಮ್ಮದ್ ಅಲಿ, ಬಹುಭಾಷಾ ಸಾಹಿತಿ ಮುಹಮ್ಮದ್ ಬಡ್ಡೂರು, ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟು ಸಹ-ಸಂಪಾದಕ ಬಿ.ಎ. ಶಂಸುದ್ದೀನ್ ಮಡಿಕೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News