ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ
Update: 2017-05-22 12:18 GMT
ಬೆಂಗಳೂರು, ಮೇ 22: ಟಿ-20 ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮಹೇಶ್ (42), ಧನಂಜಯ (29), ಆನಂದ(23) ಬಂಧಿತರು ಎಂದು ಪೊಲೀಸರು ಗುರುತಿಸಿದ್ದಾರೆ.
ಗಾಯತ್ರಿ ನಗರ 1ನೆ ಮುಖ್ಯರಸ್ತೆಯಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳಿಂದ 31 ಸಾವಿರ ರೂ. ನಗದು, ಎರಡು ಮೊಬೈಲ್ ವಶಕ್ಕೆ ಪಡೆದು ಇಲ್ಲಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.