3 ಕೋಟಿ ರೂ.ವೆಚ್ಚದಲ್ಲಿ ಸೌಲಭ್ಯಗಳ ವಿತರಣೆ

Update: 2017-05-22 15:35 GMT

ಬೆಂಗಳೂರು, ಮೇ 22: ಇಲ್ಲಿನ ಹೊಸಕೋಟೆ ನಗರದಲ್ಲಿ ವಿವಿಧ ಇಲಾಖೆಗಳಿಂದ ಸುಮಾರು 3 ಕೋಟಿ ರೂ.ಗಳ ವೆಚ್ಚದಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಟೈಲರಿಂಗ್ ಮೆಷಿನ್, ಬಡಗಿ ಕೆಲಸ ಮಾಡುವವರಿಗೆ ಬಡಗಿ ಕಿಟ್, ಮೀನುಗಾರರಿಗೆ ಮೀನಿನ ಬಲೆ ಹಾಗೂ ಮಿನಿ ಟ್ರಿಲ್ಲರ್, ಟ್ರಾಕ್ಟರ್ ಹಾಗೂ ವಿಕಲಚೇತನರಿಗೆ ನಾಲ್ಕು ಚಕ್ರದ ವಾಹನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಶಾಸಕ ಎಂಟಿಬಿ ನಾಗರಾಜು ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ಸುಮಾರು 29 ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ 3ಕೋಟಿ ರೂ.ಗಳ ಅನುದಾನವನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು. ಒಟ್ಟಾರೆ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಪಂಚಾಯತ್ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿ, ನಮ್ಮ ಜಿಲ್ಲೆಯನ್ನು ಬಹಿರ್ದೆಸೆ ಮುಕ್ತ ಜಿಲ್ಲೆ ಎಂದು ತೀರ್ಮಾನಿಸಲಾಗಿದೆ. ಅದಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲ ಪಿಡಿಒ ಹಾಗೂ ಅಧಿಕಾರಿಗಳನ್ನು ಅಭಿನಂದಿಸಲಾಗುವುದು ಎಂದರು.

ಈ ವೇಳೆ ತಹಶೀಲ್ದಾರ್ ನಾರಾಯಣ್ ವಿಠಲ್, ಜಿಲ್ಲಾ ಪಂಚಾಯತ್ ಸದಸ್ಯ ಚನ್ನಸಂದ್ರ ನಾಗರಾಜು, ತಾಲೂಕು ಪಂಚಾಯತ್ ಅಧ್ಯಕ್ಷ ಕೆಂಚೇಗೌಡ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News