ಲಾರಿಗೆ ಬೈಕ್ ಢಿಕ್ಕಿ: ಯುವಕ ಮೃತ್ಯು
Update: 2017-05-23 18:26 GMT
ಬೆಂಗಳೂರು, ಮೇ 23: ನಿಂತಿದ್ದ ಲಾರಿಗೆ ಹಿಂದಿನಿಂದ ಸ್ಕೂಟರ್‌ನಲ್ಲಿ ಬಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಾಗರಬಾವಿಯ ರುಸ್ತುಮ್ (28) ಮೃತಪಟ್ಟಿರುವ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.
ಸೋಮವಾರ ರಾತ್ರಿ 12:30ರ ಸುಮಾರಿಗೆ ನಾಗರಬಾವಿ ಕಡೆಗೆ ಮಾಳಗಾಳ ಕೆಳ ಸೇತುವೆ ರಸ್ತೆಯಲ್ಲಿ ಹೋಂಡಾ ಆಕ್ಟೀವಾ ಸ್ಕೂಟರ್‌ನಲ್ಲಿ ವೇಗವಾಗಿ ಹೋಗುತ್ತಿದ್ದಾಗ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ. ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.