ನೆಹರು ಹಾದಿಯಲ್ಲಿ ನಡೆಯೋಣ: ಸಿದ್ದರಾಮಯ್ಯ

Update: 2017-05-27 07:55 GMT

ಬೆಂಗಳೂರು, ಮೇ 27: ಮಾಜಿ ಪ್ರಧಾನ ಮಂತ್ರಿ ದಿವಂಗತ ಜವಾಹರಲಾಲ್ ನೆಹರು ಅವರ 53 ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ನೆಹರು ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ನೆಹರು ಅವರು ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದವರು, ಮತ್ತು ಮಕ್ಕಳನ್ನು ಹಾಗೂ ಈ ದೇಶವನ್ನು ಬಹಳ ಪ್ರೀತಿಸುತ್ತಿದ್ದರು. ಅವರ ಹಾದಿಯಲ್ಲೇ ನಾವೆಲ್ಲರೂ ಇಂದು ನಡೆಯಬೇಕಿದೆ ಎಂದರು.

ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಈವರೆಗೆ ಅಧಿಕೃತ ಆದೇಶದ ಪ್ರತಿ ಇನ್ನೂ ಕೈ ಸೇರಿಲ್ಲ. ಆದೇಶದ ಪ್ರತಿ ಬಂದ ಬಳಿಕ ಪರಿಶೀಲನೆ ನಡೆಸುವುದಾಗಿ, ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

ಬೆಂಗಳೂರು  ನಗರಾಭಿವೃದ್ದಿ ಸಚಿವ ಕೆ.ಜೆ.ಜಾರ್ಜ್, ಶಾಸಕ ಅಶೋಕ ಪಟ್ಟಣಶೆಟ್ಟಿ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News