ನಾಲ್ವಡಿ ಕೃಷ್ಣರಾಜ ಒಡೆಯರ್‌ ಜೀವನ, ಸಾಧನೆಯ ಛಾಯಾಚಿತ್ರ ಪ್ರದರ್ಶನ

Update: 2017-06-04 16:44 GMT
ಬೆಂಗಳೂರು, ಮೇ 4: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 133ನೆ ವರ್ಷದ ಸಂಭ್ರಮಾಚರಣೆ ಅಂಗವಾಗಿ ಕನ್ನಡ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ರಾಜ್ಯ ಪತ್ರಾಗಾರ ಇಲಾಖೆ ಹಾಗೂ ಲಲಿತಾಕಲಾ ಅಕಾಡೆಮಿ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ಅವರ ಜೀವನ ಮತ್ತು ಸಾಧನೆಯ ಛಾಯಾಚಿತ್ರ ಪ್ರದರ್ಶನ ನಾಲ್ವಡಿ ಕೃಷ್ಣರಾಜ ಒಡೆಯರ್‌ಅವರ ಜೀವನ ಮತ್ತು ಸಾಧನೆಯ ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯಿತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಬಾಲ್ಯದಿಂದ ಶುರುವಾಗಿ, ಶಿಕ್ಷಣ, ವಿವಾಹ,ಪಟ್ಟಾಭಿಷೇಕದದ ಅಪರೂಪದ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಅವರ ಕಾಲದಲ್ಲಿನ ದಸರಾ ದರ್ಬಾರ್, ಮೈಸೂರು ಸಂಸ್ಥಾನಕ್ಕೆ ನೀಡಿದ ಕೊಡುಗೆ,ಇವರು ಕೈಗೊಂಡ ರಸ್ತೆ, ರೈಲ್ವೆ, ನಗರ ನಿರ್ಮಾಣ, ಕನ್ನಂಬಾಡಿ, ಶಿಂಷಾ ವಿದ್ಯುತ್ ಯೋಜನೆಗಳ ಸಮಗ್ರ ಮಾಹಿತಿ ಛಾಯಾಚಿತ್ರ ಪ್ರದರ್ಶನದಲ್ಲಿಡಲಾಗಿತ್ತು. ಇವರ ಆಡಳಿತದಲ್ಲಿ ಕೈಗೊಂಡ ನಿರ್ಧಾರಗಳು, ಆದೇಶಗಳು, ಇದಕ್ಕೆ ಸಂಬಂಧಿಸಿದ ಕರ ಪತ್ರಗಳು, ಜನರಿಗೆ ನೀಡಿದ ಕಲ್ಯಾಣ ಕಾರ್ಯಕ್ರಮಗಳ ಚಿತ್ರಗಳು ಗತಕಾಲವನ್ನು ಮತ್ತೆ ನೆನಪಿಸುವಂತ್ತಿತ್ತು.ಕಾಗದ ಕಾರ್ಖಾನೆ, ಗಂಧದೆಣ್ಣೆ ಕಾರ್ಖಾನೆ, ರೇಷ್ಮೆ ಕಾರ್ಖಾನೆ, ಮೈಸೂರು ಕಬ್ಬಿಣ ಮತ್ತು ಉ್ಕಕು ಕಾರ್ಖಾನೆ, ಅರಗು ಮತ್ತು ಬಣ್ಣದ ಕಾರ್ಖಾನೆ, ಆಸ್ಪತ್ರೆಗಳ ನಿರ್ಮಾಣ, ಶಾಲಾ ಕಾಲೇಜುಗಳ ನಿರ್ಮಾಣದ ಚಿತ್ರಗಳು ಜನರನ್ನು ಆಕರ್ಷಿಸಿದವು. ರಾಜಪ್ರಭುತ್ವಕ್ಕೆ ಪ್ರಜಾಪ್ರಭುತ್ವ ರೂಪ: ವೇದಿಕೆ ಕಾರ್ಯಕ್ರಮದಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪನ್ಯಾಸಕ ಡಾ.ವಿ.ಎಂ.ರಮೇಶ್ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ತನ್ನ ಅಡಳಿತದಲ್ಲಿ ಮಹಿಳೆಯರಿಗೆ ಶಿಕ್ಷಣ, ಮತದಾನ ಹಕ್ಕು, ಉದ್ಯೋಗದಲ್ಲಿ ಮೀಸಲಾತಿಯನ್ನು ಜಾರಿಗೆ ತರುವ ಮೂಲಕ ರಾಜಪ್ರಭುತ್ವಕ್ಕೆ ಪ್ರಜಾಪ್ರಭುತ್ವ ರೂಪ ನೀಡಿದ್ದರು ಎಂದು ಅಭಿಪ್ರಾಯಪಟ್ಟರು. ಜನಸಾಮಾನ್ಯರ ಕಲ್ಯಾಣಕ್ಕಾಗಿ ಶಿಕ್ಷಣ, ಸಾಮಾಜಿಕ, ಆರ್ಥಿಕ ಕ್ಷೇತ್ರಗಳಿಗೆ ಹೆಚ್ಚು ಬಲ ತುಂಬಿದ್ದರು.ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಇವರು,ಮೈಸೂರು ಸಂಸ್ಥಾನದಲ್ಲಿ ಇದ್ದ 3,900 ಶಾಲೆಗಳ ಸಂಖ್ಯೆಯನ್ನು 24 ಸಾವಿರಕ್ಕೆ ಹೆಚ್ಚಿಸಿದರು. ಅಧಿಕಾರ ವಿಕೇಂದ್ರೀಕರಣ ಮಾಡಲು ಸ್ಥಳೀಯ ಸಂಸ್ಥೆಗಳನ್ನು ಸ್ಥಾಪಿಸಿದರು ಎಂದು ತಿಳಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ಮತದಾನದ ಹಕ್ಕು, ಶಿಕ್ಷಣವನ್ನು ಕಲ್ಪಿಸಿದರು. ವಿಧವಾ ವಿವಾಹಕ್ಕೆ ಪ್ರೋತ್ಸಾಹ ನೀಡಲು ನಿಧಿಯೊಂದನ್ನು ಸ್ಥಾಪಿಸಿದ್ದರು.ಅಲ್ಲದೆ ದೇಶದಲ್ಲಿ ವಿದ್ಯುತ್, ಕೈಗಾರಿಕೆ ಸ್ಥಾಪನೆ ಸೇರಿದಂತೆ ಹಲವು ಮೊದಲಗಳಿಗೆ ಚಾಲನೆಯನ್ನು ನೀಡಿದರು ಎಂದು ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಎಂ.ಎಸ್.ಅರ್ಚನಾ, ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್ ಸೇರಿದಂತೆ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News