ಬೈಕ್‌ಗೆ ಕಾರು ಢಿಕ್ಕಿ:ಯುವಕ ಮೃತ್ಯು

Update: 2017-06-05 17:23 GMT

ಬೆಂಗಳೂರು, ಜೂ.5: ಶರವೇಗವಾಗಿ ಸಾಗುತ್ತಿದ್ದ ಕಾರು ಮುಂಬದಿಯ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಅಂಚೆಪಾಳ್ಯದ ನಿವಾಸಿ ಮಣಿ(30) ಮೃತಪಟ್ಟಿರುವ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.

ಘಟನೆ ವಿವರ: ಮಣಿ ಅವರು ನಗರದ ಆರ್‌ಎಂಸಿ ಯಾರ್ಡ್‌ನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ, ಬೆಂಗಳೂರು-ತುಮಕೂರು ಮುಖ್ಯರಸ್ತೆಯ 8ನೆ ಮೈಲಿ ಸಮೀಪ ಶರವೇಗದಲ್ಲಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News