ಬೆಂಗಳೂರು: ಎನ್ ಡಿಟಿವಿ ಮೇಲಿನ ಸಿಬಿಐ ದಾಳಿ ಖಂಡಿಸಿ ಪ್ರತಿಭಟನೆ

Update: 2017-06-06 11:46 GMT

ಬೆಂಗಳೂರು, ಜೂ.6: ಎನ್ ಡಿಟಿವಿ ಮೇಲಿನ ಸಿಬಿಐ ದಾಳಿಯನ್ನು ಖಂಡಿಸಿ ಬೆಂಗಳೂರು ಪ್ರೆಸ್ ಕ್ಲಬ್ ಎದುರು ಪತ್ರಕರ್ತರ ಅಧ್ಯಯನ ಕೇಂದ್ರ ಪ್ರತಿಭಟನೆ ನಡೆಸಿತು.

ಈ ಸಂದರ್ಭ ಹಲವು ಪ್ರಗತಿಪರ ಪತ್ರಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಹಲವು ಸಾಮಾಜಿಕ ಕಾರ್ಯಕರ್ತರು, ಬರಹಗಾರರು ಉಪಸ್ಥಿತರಿದ್ದು, ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಬೆಂಗಳೂರು ಪತ್ರಕರ್ತರು ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳ ಪತ್ರಕರ್ತರೂ ಪ್ರತಿಭಟನೆಗಾಗಿ ಆಗಮಿಸಿದ್ದರು. ಈ ಸಂದರ್ಭ ಪ್ರಣಯ್ ರಾಯ್ ರ ಇಬ್ಬರು ಹಿರಿಯ ಸ್ನೇಹಿತರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News