ಕೆರೆಗಳಿಗೆ ನೀರು ತುಂಬಿಸಲು 6 ಸಾವಿರ ಕೋಟಿ ಮೀಸಲು: ಎಂ.ಬಿ.ಪಾಟೀಲ್
ಬೆಂಗಳೂರು, ಜೂ.7: ಬರಗಾಲದಿಂದ ಬರಿದಾಗಿರುವ ಕೆರೆಗಳಿಗೆ ನೀರು ತುಂಬಿಸಲು 6 ಸಾವಿರ ಕೋಟಿ ರೂ.ಮೀಸಲಿಟ್ಟಿದ್ದು, ಅದರಲ್ಲಿ ಈಗಾಗಲೇ 3 ಸಾವಿರ ಕೋಟಿ ರೂ.ಖರ್ಚಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬುಧವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಪ್ರದೀಪ್ ಶೆಟ್ಟರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ 5 ಯೋಜನೆಗಳಡಿಯಲ್ಲಿ 140 ಕೆರೆಗಳಿಗೆ ನೀರು ತುಂಬಿಸುವ ಹಾಗೂ ಇತರೆ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸಲು 6 ಸಾವಿರ ಕೋಟಿ ರೂ.ಮೀಸಲಿಟ್ಟಿದ್ದು, ಅದರಲ್ಲಿ 3 ಸಾವಿರ ಕೋಟಿ ರೂ.ಖರ್ಚು ಮಾಡಲಾಗಿದೆ ಎಂದು ಹೇಳಿದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಟೆಂಡರ್ ಮೂಲಕವೇ ಮಾಡಲಾಗುತ್ತದೆ. ಹೀಗಾಗಿ, ಈ ಯೋಜನೆಗಳ ಕಾರ್ಯಗಳು ನಿಧಾನಗತಿಯಲ್ಲಿ ನಡೆಯುತ್ತವೆಯೇ ವಿನಹ ಮತ್ಯಾವದೇ ಸಮಸ್ಯೆ ಇರುವುದಿಲ್ಲ ಎಂದು ಹೇಳಿದರು.