ಬಾಲಕಿ ಆತ್ಮಹತ್ಯೆ ಯತ್ನ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ

Update: 2017-06-08 16:36 GMT

ಕುಂದಾಪುರ, ಜೂ.8: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಶೇಡಿಮನೆಯ ಬಾಲಕಿಗೆ ಮಾನಸಿಕ ದೌರ್ಜನ್ಯ ಎಸಗಿ ಆತ್ಮಹತ್ಯೆ ಯತ್ನಕ್ಕೆ ಪ್ರೇರೇಪಿಸಿದ ಪ್ರಮುಖ ಆರೋಪಿಗಳನ್ನು ಬಂಧಿಸುವಂತೆ ಕುಂದಾಪುರ ಜನವಾದಿ ಮಹಿಳಾ ಸಂಘಟನೆ ಇಂದು ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದ ಪ್ರಮುಖ ಆರೋಪಿಗಳಾದ ಪ್ರಶಾಂತ ಹೆಗ್ಡೆ ಮತ್ತು ಪ್ರಸಾದ್ ಹೆಗ್ಡೆಯನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಶೀಲಾವತಿ ಪಡುಕೋಣೆ, ನಾಗರತ್ನ ನಾಡ, ಪದ್ಮಾವತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News