ಜೂ.19 ರಿಂದ ವಿವಿಧ ಹುದ್ದೆಗಳ ಸಂದರ್ಶನ

Update: 2017-06-12 16:42 GMT

ಬೆಂಗಳೂರು, ಜೂ. 12: ಕರ್ನಾಟಕ ಲೋಕಸೇವಾ ಆಯೋಗವು ಜೂ. 19 ಮತ್ತು 20 ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಭ್ಯರ್ಥಿಗಳ ಸಂದರ್ಶನ ನಡೆಸಲಿದೆ.

ಜೂ.1:ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2-30 ರವರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಹಾಗೂ ಅಧೀಕ್ಷಕರ ಹುದ್ದೆ ಸಂದರ್ಶನ. ಇದೇ ದಿನ ಬೆಳಿಗ್ಗೆ 9.30ಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಪ್ರಾಂಶುಪಾಲರ ಹುದ್ದೆ, ಮಧ್ಯಾಹ್ನ 2.30 ಕ್ಕೆ ಪೊಲೀಸ್ ಇಲಾಖೆಯ ನ್ಯಾಯ ಜ್ಞಾನ ಪ್ರಯೋಗಾಲಯಗಳಲ್ಲಿ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಸಂದರ್ಶನ ನಡೆಯುತ್ತದೆ.

ಅಲ್ಲದೆ, ಜೂ.19 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರ ಹುದ್ದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂರಕ್ಷಾಣಾಧಿಕಾರಿ ಹುದ್ದೆಗಳ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಹಾಯಕ ನಿರ್ದೇಶಕರ ಹುದ್ದೆ, ಕೈ ಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಮತ್ತು ಜವಳಿ ಪ್ರವರ್ಧನಾಧಿಕಾರಿ ಹುದ್ದೆಗಳ ಸಂದರ್ಶನ ನಡೆಯುತ್ತದೆ. ಜೂ. 20 ರಂದು ಮಧ್ಯಾಹ್ನ 2-30 ಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಸಂರಕ್ಷಣಾಧಿಕಾರಿಗಳ ಹುದ್ದೆಗಳ ಸಂದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News