ಪೊಲೀಸ್ ಸಿಬ್ಬಂದಿ ನೇಮಕಕ್ಕೆ ಏಕಗವಾಕ್ಷಿ ಪದ್ಧತಿ: ಪರಮೇಶ್ವರ್

Update: 2017-06-13 15:11 GMT

ಬೆಂಗಳೂರು, ಜೂ. 13: ಪೊಲೀಸ್ ಇಲಾಖೆಗೆ ಕೆಎರ್ಸಾಪಿ, ಸಿವಿಲ್, ಡಿಎಆರ್‌ಗೆ ಪ್ರತ್ಯೇಕ ಸಿಬ್ಬಂದಿ ನೇಮಕಾತಿ ಬದಲಿಗೆ ಏಕಗವಾಕ್ಷಿ ಪದ್ಧತಿಯಡಿ ಪೊಲೀಸ್ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಂಜಯ್ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹಿಂದಿನಿಂದಲೂ ಪ್ರತ್ಯೇಕವಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಕೆಎರ್ಸಾಪಿ ಸಿಬ್ಬಂದಿ ಸಿವಿಲ್ ಸೇವೆಗೆ ಬರಲು ಆಗುವುದಿಲ್ಲ ಎಂದರು.

ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಕೆಲ ರಾಜ್ಯಗಳಲ್ಲಿ ಪೊಲೀಸ್ ಸಿಬ್ಬಂದಿ ನೇಮಕ ಏಕಗವಾಕ್ಷಿ ಪದ್ಧತಿಯಡಿ ನಡೆಯುತ್ತದೆ. ಆ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಂದ ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪೊಲೀಸ್ ಠಾಣೆ ಭರವಸೆ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕೋಡ ಅಥವಾ ಮಾಸೂರಿಗೆ ಪೊಲೀಸ್ ಠಾಣೆ ಮಂಜೂರು ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಬಿಜೆಪಿ ಸದಸ್ಯ ಯು.ಬಿ.ಬಣಕಾರ್ ಪ್ರಶ್ನೆಗೆ ಪರಮೇಶ್ವರ್ ಉತ್ತರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News