ನಾಳೆಯಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
Update: 2017-06-14 14:32 GMT
ಬೆಂಗಳೂರು, ಜೂ.14: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂ.15 ರಿಂದ ಜೂ.22ರವರೆಗೆ ಎಸೆಸೆಲ್ಸಿ ಪೂರಕ ಪರೀಕ್ಷೆಯನ್ನು ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರವೀಣ್‌ಸೂದ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿದ್ದು, ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶದಲ್ಲಿ ಸೂಚಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.