ನ್ಯಾಯಾಲಯಕ್ಕೆ ಹಾಜರಾದ ಪ್ರಮೋದಾ ದೇವಿ ಒಡೆಯರ್

Update: 2017-06-21 16:13 GMT

 ಬೆಂಗಳೂರು, ಜೂ.21: ಮೈಸೂರಿನ ಹಾಲನಹಳ್ಳಿಯಲ್ಲಿರುವ ರಾಜಮನೆತನಕ್ಕೆ ಸೇರಿದ 5 ಎಕರೆ ಭೂಮಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಹಾಜರಾದರು.

2013ರಲ್ಲಿ ಸಬ್ ರಿಜಿಸ್ಟ್ರಾರ್ ಎ.ಸಿ.ಜಗದೀಶ್ ಸೂರ್ಯನಾರಾಯಣ ರಾವ್ ಅವರು ರಾಜಮನೆತನದ ಐದು ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಹಿಂದೆ ಮಹಾರಾಜ ಶ್ರೀಕಂಠದತ್ತ ಒಡೆಯರ್ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ರಾಣಿ ಪ್ರಮೋದಾ ದೇವಿ ಅವರಿಗೆ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ನಗರದ ಎಂ.ಎಸ್.ಕಟ್ಟಡದಲ್ಲಿರುವ ಲೋಕಾಯುಕ್ತ ನ್ಯಾಯಾಲಯದ ನ್ಯಾಯಮೂರ್ತಿ ವಿಜಯಲಕ್ಷ್ಮೀದೇವಿ ಅವರ ಮುಂದೆ ಪ್ರಮೋದಾ ದೇವಿ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News