ರೈತರ ಸಾಲಮನ್ನಾ ನಿರಂತರ ಹೋರಾಟದ ಫಲ: ಯಡಿಯೂರಪ್ಪ
Update: 2017-06-22 07:32 GMT
ಬೆಂಗಳೂರು, ಜೂ.22: ರಾಜ್ಯ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರ ಸಾಲ ಮನ್ನಾಕ್ಕೆ ರಾಜ್ಯ ಸರಕಾರ ತೆಗೆದುಕೊಂಡಿರುವ ನಿರ್ಧಾರ ನಮ್ಮ ನಿರಂತರ ಹೋರಾಟದ ಫಲವಾಗಿದೆ. ನಮ್ಮ ಒತ್ತಾಯಕ್ಕೆ ಮಣಿದು ಸಿಎಂ ಸಾಲ ಮನ್ನಾ ಮಾಡಿದ್ದಾರೆ. ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಜು.7,8 ಹಾಗೂ 9 ರಂದು ಪಕ್ಷದ ವತಿಯಿಂದ ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.