ಜೂ.26ರಂದು ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ

Update: 2017-06-24 14:01 GMT

ಬೆಂಗಳೂರು, ಜೂ.24: ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ ಸಮಾರಂಭವನ್ನು ಜೂ.26ರಂದು ಬೆಳಗ್ಗೆ 10.30ಕ್ಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದೆ.

ಈ ಸಂಬಂಧ ನಗರದ ಮೌರ್ಯ ಹೋಟೆಲ್ ವೃತ್ತದ ಗಾಂಧಿ ಪ್ರತಿಮೆಯಿಂದ ಕುಮಾರಪಾರ್ಕ್‌ನ ಗಾಂಧಿ ಭವನದವರೆಗೆ ಬೆಳಗ್ಗೆ 9 ಗಂಟೆಗೆ ಜಾಗೃತಿ ಜಾಥಾದ ಉದ್ಫಾಟನೆ ನೆರವೇರಲಿದೆ. ನಟ ಚೇತನ್ ಈ ಜಾಗೃತಿ ಜಾಥಾ ಉದ್ಫಾಟನೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಉದ್ಫಾಟನೆಯನ್ನು ಮಾಜಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಎಚ್.ಸಿ.ರುದ್ರಪ್ಪವಹಿಸಲಿದ್ದಾರೆ. ಸಚಿವ ರೋಷನ್‌ಬೇಗ್, ಸಂಸದ ಪಿ.ಸಿ.ಮೋಹನ್, ರಾಜ್ಯ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೆ ಪಿ.ಕೃಷ್ಣ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜು, ಮಾಧ್ಯಮ ಅಕಾಡಮಿ ಅಧ್ಯಕ್ಷ ಎಂ.ಸಿದ್ದರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್, ನಿಮ್ಹಾನ್ಸ್‌ನ ಮನೋವೈದ್ಯ ಡಾ.ಪ್ರತಿಮಾಮೂರ್ತಿ ಹಾಗೂ ಬೆಂಗಳೂರು ವಿವಿ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ.ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News