ಗೆದ್ದವರು ಇನ್ನೆಷ್ಟು ಮಾತನಾಡಬೇಕು: ಸಚಿವ ಶಿವಕುಮಾರ್

Update: 2017-06-24 14:08 GMT

ಬೆಂಗಳೂರು, ಜೂ. 24: ಸಿದ್ದರಾಮಯ್ಯರ ನಾಯಕತ್ವದಲ್ಲೆ ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಎದುರಿಸಿ ಸೋತ ಎಚ್.ವಿಶ್ವನಾಥ್ ಇದೀಗ ಸಿಎಂ ಸಿದ್ದರಾಮಯ್ಯರ ವಿರುದ್ಧ ಹೇಳಿಕೆ ನೀಡುತ್ತಿದ್ದು, ಸೋತ ವ್ಯಕ್ತಿಯೇ ಇಷ್ಟು ಮಾತನಾಡುವ ವೇಳೆ ಗೆದ್ದವರು ಇನ್ನೆಷ್ಟು ಮಾತನಾಡಬೇಕೆಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ಅವರು ಇದೀಗ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ್ದಾರೆ. ಅವರು ಇದೀಗ ಬೇರೆ ಪಕ್ಷಕ್ಕೆ ಹೋಗುತ್ತಿದ್ದು, ಬಹಳ ದೊಡ್ಡವರು ಅವರ ವಿಚಾರ ನಾನು ಮಾತನಾಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಜೂ.29ಕ್ಕೆ ಸಭೆ: ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕೊಡಲಸಂಗಮದಲ್ಲಿ ಜೂ.29 ಮತ್ತು ಜೂ.30ಕ್ಕೆ ಬೆಳಗಾವಿಯ ಅಥಣಿಯಲ್ಲಿ ಪಕ್ಷದ ಸಮಾವೇಶ ಏರ್ಪಡಿಸಲಾಗುತ್ತಿದ್ದು, ಎಐಸಿಸಿ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ತಾನು ಕೆಪಿಸಿಸಿ ವಕ್ತಾರನಲ್ಲ. ಆದರೆ, ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆಗೆ ಮೈಸೂರು ವಿಭಾಗದ ಹಾಸನದಲ್ಲಿ ಸಭೆ ನಡೆಸಲಾಗುವುದು ಎಂದ ಅವರು, ಎಐಸಿಸಿ ಕಾರ್ಯದರ್ಶಿಗಳು ಸೇರಿದಂತೆ ರಾಷ್ಟ್ರೀಯ ಮುಖಂಡರು 15ರಿಂದ 20 ದಿನಗಳ ಕಾಲ ರಾಜ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News