ಆ.16ರಿಂದ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಘೋಷಣೆಗಾಗಿ ಸಮೀಕ್ಷೆ

Update: 2017-08-14 16:16 GMT

ಮಂಗಳೂರು, ಆ.14: ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ದ.ಕ. ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಎಂದು ಘೋಷಿಸಲಾಗಿದೆ. ಆ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲ ಮನೆಗಳಲ್ಲಿ ಶೌಚಾಲಯವನ್ನು ಹೊಂದಿಕೊಂಡು ಬಳಕೆ ಮತ್ತು ನಿರ್ವಹಣೆ ಮಾಡುತ್ತಿರುವ ಬಗ್ಗೆ ಸಾಮಾಜಿಕ ಪರಿಶೋಧನಾ ಕಾರ್ಯವನ್ನು ಆ.16ರಿಂದ ಸೆ.2ರವರೆಗೆ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ.

ಈ ಸಾಮಾಜಿಕ ಪರಿಶೋಧನಾ ಕಾರ್ಯಕ್ಕೆ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಿಂದ 75 ಸದಸ್ಯರ ತಂಡವನ್ನು 5 ತಾಲೂಕು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ನಿಯೋಜಿಸಲಾಗಿರುತ್ತದೆ. ಆದುದರಿಂದ ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಶೌಚಾಲಯವನ್ನು ಹೊಂದಿಕೊಂಡು ಬಳಕೆ ಮತ್ತು ನಿರ್ವಹಣೆ ಮಾಡುತ್ತಿರುವ ಬಗ್ಗೆ ನಡೆಯುವ ಸಾಮಾಜಿಕ ಪರಿಶೋಧನಾ ತಂಡಕ್ಕೆ ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿಗಳು ಬಂದಾಗ ಅಗತ್ಯ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News