ಯಕ್ಷಗಾನ ತರಬೇತಿ ಉದ್ಘಾಟನೆ

Update: 2017-08-18 14:30 GMT

ಉಡುಪಿ, ಆ.18: ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನ ರಂಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಹಮ್ಮಿ ಕೊಳ್ಳಲಾದ ಯಕ್ಷಗಾನದ ರಂಗಸಾಧ್ಯತೆಗಳ ಕುರಿತ ತರಬೇತಿ ಶಿಬಿರವನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಆಡಳಿ ತಾಧಿಕಾರಿ ಡಾ.ಎಚ್.ಶಾಂತಾರಾಮ್ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಡಾ.ಪಿ.ಎಲ್.ಎನ್.ರಾವ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಭಂಡಾರ್‌ಕಾರ್ಸ್‌ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ವಸಂತ ಬನ್ನಾಡಿ, ತಲ್ಲೂರು ಶಿವರಾಮ ಶೆಟ್ಟಿ, ಕೇಂದ್ರದ ಸಂಯೋಜಕ ಪ್ರೊ. ವರದೇಶ ಹಿರೇಗಂಗೆ ಉಪಸ್ಥಿತರಿದ್ದರು. ಡಾ.ಪ್ರಶಾಂ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಗುರು ಬನ್ನಂಜೆ ಸಂಜೀವ ಸುವರ್ಣರ ನಿರ್ದೇಶನದಲ್ಲಿ ಯಕ್ಷಗಾನ ಕೇಂದ್ರದ ಗುರುಗಳಾದ ಕೃಷ್ಣಮೂರ್ತಿ ಭಟ್, ಗುರು ದಿನೇಶ್ ಭಟ್ ಯಲ್ಲಾಪುರ, ಗುರು ಶೈಲೇಶ್ ನಾಯ್ಕ ತೀರ್ಥಹಳ್ಳಿ, ಗುರು ನಿತೀಶ್ ಕುಮಾರ್ ಇವರಲ್ಲಿ 15 ಮಂದಿ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News