ತುಂಬೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Update: 2017-08-18 17:50 GMT

ಬಂಟ್ವಾಳ, ಆ. 18: ತುಂಬೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಪುದು ಮಾಪಿಲಾ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು.

ಶಿಕ್ಷಣ ಸಂಯೋಜಕ ಶ್ರೀಕಾಂತ್ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಉಮರ್ ಫಾರೂಕ್ ಮಾತನಾಡಿ, ಸರಕಾರಿ ಶಾಲೆಯಲ್ಲಿ ಕಲಿಯುವ ಬಡ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರತಿಭಾ ಕಾರಂಜಿ ಮೂಲಕ ಗುರುತಿಸಲಾಗುತ್ತದೆ. ವಿದ್ಯಾರ್ಥಿಗಳು ಪ್ರಥಮ ಬಹುಮಾನ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸ ಬೇಡಿ. ಇಂದು ಬಹುಮಾನ ಸಿಗದಿದ್ದರೂ ನಿರಾಶರಾಗದೆ ಮತ್ತೆ ಪ್ರಯತ್ನ ಮುಂದುವರೆಸಿ ಎಂದರು.

ವೇದಿಕೆಯಲ್ಲಿ ಪುದು ಗ್ರಾಪಂ ಉಪಾಧ್ಯಕ್ಷ ಹಾಶೀರ್ ಪೇರಿಮಾರ್, ಮಜೀದ್ ಫರಂಗಿಪೇಟೆ, ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ನಾಸೀರ್, ತಾಲೂಕು ಸಂಪನ್ಮೂಲ ವ್ಯಕ್ತಿ ಶುಭ, ಸಿಆರ್‌ಪಿ ನಂದಾ, ಅಬ್ಬಾಸ್, ಅಬೂಬಕ್ಕರ್ ರಝಾಕ್ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಶಕುಂತಳ ಸ್ವಾಗತಿಸಿ, ವಂದಿಸಿದರು. ಅನಿತಾ ಲೋಬೋ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆದವು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ತುಂಬೆ ಸಹಯೋಗ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News