ತಲಪಾಡಿ: ಅಪರಿಚಿತ ಮೃತದೇಹ ಪತ್ತೆ

Update: 2017-08-23 07:17 GMT

ಉಳ್ಳಾಲ, ಆ.23: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿಯ ಪೊದೆಯೊಂದರಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ.

ತಲಪಾಡಿಯ ಚೆಕ್‌ಪೋಸ್ಟ್ ಬಳಿ ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೇರಳದ ಮೂಲದ ವ್ಯಕ್ತಿ ಎಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು ಮೃತದೇಹವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News