ಕೈದಿಯಿಂದ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪ್ರಕರಣ ದಾಖಲು

Update: 2017-08-23 17:16 GMT

ಮಂಗಳೂರು, ಆ. 23: ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ ನಗರ ಸಶಸ್ತ್ರ ಪೊಲೀಸ್ ಪೇದೆ ಮೇಲೆ ವಿಚಾರಣಾಧೀನ ಕೈದಿಯೋರ್ವ ಹಲ್ಲೆ ನಡೆಸಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರತ್ಕಲ್ ನಿವಾಸಿ ಮುಹಮ್ಮದ್ ರಫೀಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಧಿಸಿ ಬಂಧಿತನಾಗಿರುವ ಈತನನ್ನು ಬೆಳಗ್ಗೆ ಸಿಜೆಎಂ ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯುವಾಗ ಜೈಲ್‌ನೊಳಗೆ ಬಂದು ಕೈಗೆ ಕೋಳ ತೊಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್‌ರ ಮೇಲೆ ಕೈ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆಂದು ಜೈಲರ್ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News