ವಿದ್ಯಾರ್ಥಿನಿ ಕಾವ್ಯಾ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹಿಸಿ ಮೊಂಬತ್ತಿ ಹಿಡಿದು ಪ್ರತಿಭಟಿಸಿ

Update: 2017-08-23 18:23 GMT

ಮಂಗಳೂರು, ಆ. 23: ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳೂರಿನ ಉರ್ವಸ್ಟೋರ್‌ನಲ್ಲಿ ಡಿವೈ‌ಎಫ್‌ಐ ಉರ್ವಸ್ಟೋರ್ ಘಟಕದ ಕಾರ್ಯಕರ್ತರು ಮೊಂಬತ್ತಿ ಹಿಡಿದು ಪ್ರತಿಭಟಿಸಿದರು.

ತನಿಖೆ ವಿಳಂಬ ಗತಿಯಲ್ಲಿ ಸಾಗುತ್ತಿದ್ದು, ಇದರಿಂದಾಗಿ ತನಿಖೆಯ ಹಾದಿ ತಪ್ಪುವ ಸಾಧ್ಯತೆ ಇದೆ. ಅಲ್ಲದೇ ಸರಕಾರ ಮತ್ತು ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಡಿವೈ‌ಎಫ್‌ಐ ಮುಖಂಡರ ಆರೋಪಿಸಿದೆ. ಅಲ್ಲದೇ ಪ್ರಕರಣದ ಬಗ್ಗೆ ಸಮಗ್ರ ತನಿಖೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳುವಂತೆಯೂ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಡಿವೈ‌ಎಫ್‌ಐ ಮುಖಂಡರಾದ ಬಿ.ಕೆ.ಇಮ್ತಿಯಾಝ್, ಸಂತೋಷ್ ಬಜಾಲ್, ಎಸ್‌ಎಫ್‌ಐ ಮುಖಂಡ ನಿತಿನ್ ಕುತ್ತಾರ್ ಮೊದಲಾದವರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News