'ಕಿಮ್ಸ್ ಕಲ್‍ರವ್ - 2017' ಅಂತರ್ ಕಾಲೇಜ್ ಸ್ಪರ್ಧೆ ಉದ್ಘಾಟನೆ

Update: 2017-08-25 15:24 GMT

ದೇರಳಕಟ್ಟೆ,ಆ.25: ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಸಯನ್ಸ್ ಕಾಲೇಜಿನ ವತಿಯಿಂದ ನಡೆದ ಕಿಮ್ಸ್ ಕಲ್‍ರವ್ 2017 ಅಂತರ್ ಕಾಲೇಜ್ ಸ್ಪರ್ಧೆಯ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರೊ. ರವಿಶಂಕರ್ ಆಂಗ್ಲ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು “ಸ್ಪರ್ಧೆಯಲ್ಲಿ ಭಾಗವಹಿಸುವುದರ ಮುಖ್ಯ ಉದ್ದೇಶವನ್ನು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ಸ್ಪರ್ಧೆಯಲ್ಲಿ ಸೋಲು – ಗೆಲುವು ಎಂಬುದು ಸಾಮಾನ್ಯ, ಆದರೆ ನಮ್ಮ ಪ್ರಯತ್ನವನ್ನು ಮುಂದುವರಿಸುತ್ತಲೇ ಇರಬೇಕು. ಆಗ ಭವಿಷ್ಯದಲ್ಲಿ ಗೆಲುವು ನಿಶ್ಚಿತ, ಅದೇ ಜೀವನದ ಸಿದ್ಧಾಂತ” ಎಂದರು.

ಪ್ರಾಂಶುಪಾಲರಾದ ಪ್ರೊ. ಇಕ್ಬಾಲ್ ಅಹಮದ್ ಯು.ಟಿ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ. ಹೇಮಲತಾ, ಕಣಚೂರು ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲರಾದ ವಿನೀತಾ ಮಥಾಯಸ್, ಕಣಚೂರು ಪ್ರೈಮರಿ ಸ್ಕೂಲ್‍ನ ಪ್ರಾಂಶುಪಾಲರಾದ ಶ್ರೀಮತಿ ಆನಂದಿ, ಪ್ರಿಸ್ಕೂಲ್‍ನ ಲಿನೇಟ್ ಡಿ.ಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಪ್ರೊ. ಇಕ್ಬಾಲ್ ಅಹಮದ್ ಯು.ಟಿ. ಅತಿಥಿಗಳನ್ನು ಸ್ವಾಗತಿಸಿದರು, ಮುಬೀನ್ ತಾಜ್ ಕಾರ್ಯಕ್ರಮ ನಿರೂಪಿಸಿದರು, ಉಪನ್ಯಾಸಕಿ ಶ್ರೀಮತಿ ಸಫೀನಾ ವಂದಿಸಿದರು..

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News