ಅಕ್ರಮ ಮದ್ಯ ಮಾರಾಟ: ಆರೋಪಿ ಸೆರೆ

Update: 2017-08-26 17:04 GMT

ಪುತ್ತೂರು, ಆ. 26: ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಶನಿವಾರ ಪತ್ತೆ ಹಚ್ಚಿದ ಪುತ್ತೂರು ಅಬಕಾರಿ ಅಧಿಕಾರಿಗಳು ಮಹಿಳೆಯೊಬ್ಬರ ಸಹಿತ ಸುಮಾರು 15 ಸಾವಿರ ರೂ.  ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪುತ್ತೂರು ತಾಲೂಕಿನ ಕೊಯ್ಲ ಗ್ರಾಮದ ಆತೂರು ನಿವಾಸಿ ಮುತ್ತಪ್ಪ ಪೂಜಾರಿ ಎಂಬವರ ಪತ್ನಿ ವೇದಾವತಿ (40) ಬಂಧಿತ ಆರೋಪಿ. ಅವರು ತನ್ನ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶನಿವಾರ  ಅಬಕಾರಿ ಅಧಿಕಾರಿಗಳು ಮನೆಗೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಒಟ್ಟು 147 ಮದ್ಯದ ಬಾಟಲಿಗಳು ಮನೆಯಲ್ಲಿ ಪತ್ತೆಯಾಗಿವೆ.

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಡೆಸದಂತೆ ಜಿಲ್ಲಾಧಿಕಾರಿಗಳು ನಿಷೇಧ ಅದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು ಬಂದ್ ಆಗಿತ್ತು. ಈ ಸಂದರ್ಭದಲ್ಲಿ ಮನೆಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ನಡೆಸುತ್ತಿರುವುದಾಗಿ ಆರೋಪ ವ್ಯಕ್ತವಾಗಿದೆ.

ಅಬಕಾರಿ ಉಪನಿರೀಕ್ಷಕರಾದ ಸುಜಾತ ಎ, ಅಂಗಾರ ಪಡೀಲು, ಸಿಬ್ಬಂದಿಗಳಾದ ಸುಕುಮಾರ, ಪ್ರೇಮಾನಂದ, ವಿಜಯ ಕುಮಾರ್, ಚಾಲಕ ಶರತ್ ಮತ್ತು ತಿಪ್ಪೇಸ್ವಾಮಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಉಪನಿರೀಕ್ಷಕ ಅಂಗಾರ ಪಡೀಲು ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News