ಕಣಚೂರಿನಲ್ಲಿ ‘ಶೋಧ ಅಂತರ್ ಕಾಲೇಜ್ ಸ್ಪರ್ಧೆ' ಉದ್ಘಾಟನೆ

Update: 2017-08-26 17:10 GMT

ಕೊಣಾಜೆ, ಆ. 26: ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಸಯನ್ಸ್ ಕಾಲೇಜಿನ ವತಿಯಿಂದ ನಡೆದ ‘ಶೋಧ 2017 ಅಂತರ್ ಕಾಲೇಜ್ ಸ್ಪರ್ಧೆಯ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅಬ್ದುಲ್ ರಹ್ಮಾನ್ ಅವರು ಇಂದು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳ ಪ್ರದರ್ಶನಕ್ಕೆ ಹಲವಾರು ಅವಕಾಶಗಳಿವೆ.  ಆದ್ದರಿಂದ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಗೆ ಸಾಕ್ಷಿಯಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದ ಸಂಸ್ಥೆ0ು ಅಧ್ಯಕ್ಷ ಹಾಜಿ ಯು.ಕೆ.ಮೋನು,  ಸ್ಪರ್ಧಾತ್ಮಕ ಸಮಾಜದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋ ಭಾವವನ್ನು ಬೆಳೆಸಿ ಮುಂದೆ ಬರಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ  ಪ್ರೊ. ಇಕ್ಬಾಲ್ ಅಹಮದ್ ಯು.ಟಿ. ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ವಾಣಿಜ್ಯವಿಭಾಗದ ಉಪನ್ಯಾಸಕ ಅವಿನಾಶ್ ಎಸ್.ಎಂ.,  ಆ್ಯಂಜಲಿನ್ ಸುಪ್ರಿಯಾ ಲೋಬೋ, ಕಣಚೂರು ಸಂಸ್ಥೆಯ ವಿವಿಧ ವಿಭಾಗದ ಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಮುಬೀನ್ ತಾಜ್ ಕಾರ್ಯಕ್ರಮ ನಿರೂಪಿಸಿದರು, ವಾಣಿಜ್ಯ ವಿಭಾಗದ ಉಪನ್ಯಾಸಕಿ ಆ್ಯಂಜಲಿನ್ ಸುಪ್ರಿಯಾ ಲೋಬೋ ವಂದಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಕಣಚೂರು ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ವಿನೀತಾ ಮಥಾಯಸ್, ಪ್ರಿಸ್ಕೂಲ್‌ನ ಲಿನೇಟ್ ಡಿ.ಸೋಜ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News