ಸೆ.1: ಸಂತ ವಿಕ್ಟರ್ ಬಾಲಿಕ ಪ್ರೌಢಶಾಲೆಯ ಅಮೃತ ಮಹೋತ್ಸವ

Update: 2017-08-28 13:47 GMT

ಪುತ್ತೂರು,ಆ.28: 75 ವರ್ಷ ಪೂರೈಸುತ್ತಿರುವ ಪುತ್ತೂರಿನ ಸಂತ ವಿಕ್ಟರ್ ಬಾಲಿಕ ಪ್ರೌಢಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ ಹಾಗೂ ಸ್ಮಾರಕ ಕಟ್ಟಡದ ಶಿಲನ್ಯಾಸ ಕಾರ್ಯಕ್ರಮ ಸೆ.1ರಂದು ಪೂವಾಹ್ನ ಮಾಯ್ ದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಾಯ್ ದೇ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ. ಫಾ. ಅಲ್ಫ್ರೆಡ್ ಜೆ. ಪಿಂಟೋ ತಿಳಿಸಿದ್ದಾರೆ. 
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ ಕೆಥೊಲಿಕ್ ಶಿಕ್ಷಣ ಮಂಡಳಿ ಅಧ್ಯಕ್ಷ ರೆ. ಫಾ. ಡಾ. ಅಲೋಶಿಯಸ್ ಪೌಲ್ ಡಿ'ಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಲಿದ್ದಾರೆ. 

ಶಾಸಕಿ ಶಕುಂತಳಾ ಶೆಟ್ಟಿ, ಕೆಥೊಲಿಕ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರೆ. ಫಾ. ಜೆರಾಲ್ಡ್ ಡಿ'ಸೋಜ, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ನಗರಸಭೆಯ ಅಧ್ಯಕ್ಷೆ ಜಯಂತಿ ಬಲ್ನಾಡು, ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ. ಶಿವರಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್, ನಗರಸಭಾ ಸದಸ್ಯ ರಾಜೇಶ್ ಬನ್ನೂರು, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆ.ಪಿ. ರೋಡ್ರಿಗಸ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.  

ಈ ಸಂದರ್ಭದಲ್ಲಿ ಸುಮಾರು ತೂ. 3 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ನಡೆಸಲಾಗುವುದು ಹಾಗೂ 50 ವರ್ಷ ಪೂರೈಸುತ್ತಿರುವ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸುವರ್ಣ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. 
ಸುದ್ದಿಗೋಷ್ಠಿಯಲ್ಲಿ ಶಾಲಾ ಮುಖ್ಯಗುರು ರೋಸ್‍ಲಿನ್ ಲೋಬೊ, ಹಿರಿಯ ಶಿಕ್ಷಕ ಇನಾಸ್ ಗೋನ್ಸಾಲ್ವಿಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಉಷಾ ಅಂಚನ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News