ಅಕ್ರಮ ಶ್ರೀಗಂಧದ ತುಂಡು ಸಾಗಾಟ ಪ್ರಕರಣ: ಆರೋಪಿಯ ಬಂಧನ

Update: 2017-08-29 15:54 GMT

ಪುತ್ತೂರು, ಆ. 29: ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಬಳಿಯ ಗುಡ್ಡೆಯಿಂದ ಶ್ರೀಗಂಧದ ಮರವನ್ನು ಕಡಿದು ತುಂಡುಗಳಾಗಿ ಪರಿವರ್ತಿಸಿ ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಸುಂಕದಮೂಲೆ ನಿವಾಸಿ ಧನಂಜಯ ನಾಯ್ಕಾ (50) ಬಂಧಿತ ಆರೋಪಿ.

ಕಳೆದ ಆ.20ರಂದು ನಸುಕಿನ ವೇಳೆ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪುತ್ತೂರು ತಾಲೂಕಿನ ರಾಮಕುಂಜ ಗ್ರಾಮದ ಪೂವಪ್ಪ ಮೂಲ್ಯ ಮತ್ತು ಆರ್ಯಾಪು ಗ್ರಾಮದ ಕೇಶವ ಎಂಬವರನ್ನು ಬಂಧಿಸಿ ಅವರ ವಶದಲ್ಲಿದ್ದ  10 ಸಾವಿರ ರೂ. ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದಲ್ಲಿ ಭಾಗಿಯಾದ ಆರೋಪಿ ಧನಂಜಯ ನಾಯ್ಕೆ ಪೊಲೀಸರ ಈ ಕಾರ್ಯಾಚರಣೆಯ ವೇಳೆ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News