ಡಿಸೆಂಬರ್‍ನಲ್ಲಿ 5ನೆ ಬ್ಯಾರಿ ಸಾಹಿತ್ಯ ಸಮ್ಮೇಳನ

Update: 2017-08-30 16:47 GMT

ಮಂಗಳೂರು, ಆ.30: ಡಿಸೆಂಬರ್ ನಲ್ಲಿ 5ನೆ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಸಲು ಮಂಗಳೂರು ನಗರದಲ್ಲಿ  ಇಂದು ನಡೆದ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಹಿಂದೆ ಮಂಗಳೂರು, ಬಂಟ್ವಾಳ ಮತ್ತು ಉಡುಪಿಯಲ್ಲಿ ಕ್ರಮವಾಗಿ ಒಂದನೆ, ಎರಡನೆ ಮತ್ತು ಮೂರನೆ ಬ್ಯಾರಿ ಸಾಹಿತ್ಯ ಸಮ್ಮೇಳನಗಳು ನಡೆದಿದ್ದು, 2007ರಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ 4ನೆ ಬ್ಯಾರಿ ಸಾಹಿತ್ಯ ಸಮ್ಮೇಳನ ಬಳಿಕ ಎಲ್ಲೂ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆದಿಲ್ಲ.

ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ 5ನೆ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಸಲು ಸಂಘ ಮುಂದಾಗಿದೆ. ಸಮ್ಮೇಳನದ ರೂಪುರೇಶೆಗಳನ್ನು ನಿರ್ಣಯಿಸಲು ರಾಜ್ಯ ಮಟ್ಟದ ಸ್ವಾಗತ ಸಮಿತಿಯನ್ನು ರಚಿಸಲಾಗುವುದು. ಸಭೆಯಲ್ಲಿ ಸಮ್ಮೇಳನದ ದಿನಾಂಕ, ಸ್ಥಳ, ಕಾರ್ಯಕ್ರಮ, ಸಮ್ಮೇಳನಾಧ್ಯಕ್ಷರ ಆಯ್ಕೆ ಹಾಗೂ ಮತ್ತಿತರ ವಿಷಯಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಉಮರ್ ಯು. ಎಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News