ನಾರಿಶಕ್ತಿ ಪುರಸ್ಕಾರ: ಅರ್ಜಿ ಆಹ್ವಾನ

Update: 2017-09-03 14:23 GMT

ಮಂಗಳೂರು, ಸೆ.3: ಕೇಂದ್ರ ಸರಕಾರದಿಂದ ನೀಡಲ್ಪಡುವ 2017ನೆ ಸಾಲಿನ ನಾರಿಶಕ್ತಿ ಪುರಸ್ಕಾರಕ್ಕಾಗಿ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪುರಸ್ಕಾರವನ್ನು ಮಹಿಳೆಯರು ಸಾಮಾಜಿಕ ಅಭಿವೃದ್ಧಿ ಕಾರ್ಯದಲ್ಲಿ ಉನ್ನತ ಮಟ್ಟದ ವೈಯಕ್ತಿಕ ಧೈರ್ಯ ಸ್ಥೈರ್ಯಗಳೊಂದಿಗಿನ ಸಾಧನೆಗಾಗಿ ಐತಿಹಾಸಿಕ ಸಾಧನೆ ಮಾಡಿದ ಮಹಿಳೆಯರ ಹೆಸರಿನಲ್ಲಿ 5 ಪ್ರಶಸ್ತಿಗಳನ್ನು ರಾಷ್ಟ್ರಮಟ್ಟದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೀಡಲಾಗುತ್ತದೆ.

ಪ್ರಶಸ್ತಿ ಬಗ್ಗೆ ನೀಡಲಾದ ಮಾರ್ಗಸೂಚಿಯಂತೆ ಮಹಿಳಾ ಸಬಲೀಕರಣ, ಮಹಿಳೆಯರ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿ ಸಂಶೋಧನೆ ಮತ್ತು ಇನ್ನಿತರ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟವಾದ ಕಾರ್ಯಸಾಧನೆ ಮಾಡಿರಬೇಕು. ಪ್ರಶಸ್ತಿಯು ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ 2017-18ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅರತವಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವೀರ ಮಹಿಳೆ ಪ್ರಶಸ್ತಿಗೆ 18 ರಿಂದ 45 ವಯೋಮಿತಿಯೊಳಗಿನ ಮಹಿಳೆಯು ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡಲು ಅಥವಾ ಪ್ರಾಣ ರಕ್ಷಿಸಲು ತನ್ನ ಜೀವದ ಹಂಗನ್ನು ತೊರೆದು ಸಮಯಪ್ರಜ್ಞೆ, ಧೈರ್ಯ, ಸಾಹಸದಿಂದ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡಿದಂತಹ ಕಾರ್ಯವನ್ನು ಮಾಡಿರಬೇಕು ಮತ್ತು ಈ ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು.

ಅರ್ಜಿಯೊಂದಿಗೆ ಸಾಧನೆಗಳ ದಾಖಲೆಗಳ ಪ್ರಸ್ತಾವನೆಯನ್ನು ಸೆ.15ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಪಂ ಕಚೇರಿ ಸಂಕೀರ್ಣ, ಉರ್ವಾಸ್ಟೋರ್, ಮಂಗಳೂರು-575006 ಇಲ್ಲಿಗೆ ಸಲ್ಲಿಸಬಹುದು. ಮಾಹಿತಿಗಾಗಿ ದೂ.ಸಂ: 0824-2451254ನ್ನು ಸಂಪರ್ಕಿಸ ಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News