ಮಾನವೀಯ ಮೌಲ್ಯಗಳನ್ನು ಕಲಿಸಿ: ಶಿಕ್ಷಕರಿಗೆ ಪ್ರಮೋದ್ ಕರೆ

Update: 2017-09-05 19:32 GMT

ಬ್ರಹ್ಮಾವರ, ಸೆ.5: ವೌಲ್ಯಾಧಾರಿತ ಸಮಾಜ ಕಟ್ಟುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಹೀಗಾಗಿ ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ನೀಡದೆ, ಅದರೊಂದಿಗೆ ಮಾನವೀಯ ವೌಲ್ಯಗಳನ್ನು ಕಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಎಳೆಯ ಬುದ್ದಿ ಹಾಗೂ ಮನಸ್ಸಿಗೆ ಉತ್ತಮ ನಡವಳಿಕೆಯ ನೀತಿ ಪಾಠ ಹೇಳುವುದರಿಂದ ಮುಂದೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಶಿಕ್ಷಕರಿಗೆ ಶೀಘ್ರದಲ್ಲಿ 7ನೇ ವೇತನ ಆಯೋಗದ ವರದಿ ಜಾರಿಯಾಲಿದೆ ಎಂದು ಪ್ರಮೋದ್ ನುಡಿದರು.

ಸಮಾರಂಭದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮಾಜಿ ಶಾಸಕ ಕೆ.ರಘುಪತಿ ಭಟ್, ಮಾಜಿ ತಾಪಂ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ಸದಸ್ಯೆ ಕುಸುಮಾ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ಉಮೇಶ್ ಎ.ನಾಯ್ಕೆ, ಚಾಂತಾರು ಗ್ರಾಪಂ ಅಧ್ಯಕ್ಷೆ ಸರಸ್ವತಿ ನಾಯ್ಕೆ, ವಿವಿಧ ಶಿಕ್ಷಕ ಸಂಘಟನೆಗ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸ್ವಾಗತಿಸಿದರು. ಸತೀಶ್ಚಂದ್ರ ಶೆಟ್ಟಿ ಮತ್ತು ಶ್ರೀಕಾಂತ್ ಸಾಮಂತ್ ಕಾರ್ಯಕ್ರಮ ನಿರೂಪಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News