ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Update: 2017-09-06 15:02 GMT

ಬಂಟ್ವಾಳ, ಸೆ. 6: ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸಜೀಪಮೂಡದ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನ ಮಂದಿರದಲ್ಲಿ  ಆಚರಿಸಲಾಯಿತು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸನಾತನ ಹಿಂದೂ ಧರ್ಮದಲ್ಲಿ ಸಾಮಾಜಿಕ ಅಸಮಾನತೆ ಇದ್ದ ಕಾಲದಲ್ಲಿ ಸಾಮಾಜಿಕ ನ್ಯಾಯ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರು. ಕ್ರಾಂತಿಯ ಬೀಜ ಬಿತ್ತಿ ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಿದ್ದಾರೆ. ಇದನ್ನು ಮತ್ತೆ ಸಮಾಜಕ್ಕೆ ತಿಳಿಸುವ ಕಾರ್ಯ ಆಗಬೇಕಿದ್ದು ನಾರಾಯಣ ಗುರುಗಳ ಸಂದೇಶ ಇಂದಿಗೂ ಪ್ರಸ್ತುತ ಎಂದರು. 

ಮತೀಯ ಸಾಮಾರಸ್ಯ ಕದಡುವ ನಿಟ್ಟಿನಲ್ಲಿ ಹತ್ಯೆಯಂತಹ ಹೇಯ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ. ಇದಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಾಯ ಮಾಡಿದವರು, ಅಪಪ್ರಚಾರ ಮಾಡುವವರು ಸರ್ವನಾಶ ಆಗಬೇಕು ಎಂದರು. 

ಕಾಸರಗೋಡು ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷ ಕೃಷ್ಣ ಶಿವಕೃಪ ಕುಂಜತ್ತೂರು ಪ್ರಧಾನ ಭಾಷಣ ಮಾಡಿ ಜಗತ್ತಿಗೆ ಮಾನವ ತತ್ವವನ್ನು ಭೋದಿಸಿದ ಮಹಾನ್ ಗುರು ಬ್ರಹ್ಮಶ್ರೀ ನಾರಾಯಣ ಗುರು ಎಂದರು. 

ಸಾಮಾಜಿಕ ಪರಿವರ್ತನೆ ಮಾತ್ರವಲ್ಲದೆ ಅನೇಕರ ರೋಗ ರುಜಿನಗಳನ್ನು ಗುರು ನಿವಾರಣೆ ಮಾಡಿದ್ದಾರೆ. ಬ್ರಹ್ಮಶ್ರೀ ನಾರಯಣ ಗುರುಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಬದಲಾಗಿ ಇಡೀ ಮಾನವ ಸಮುದಾಯಕ್ಕೆ ಮಾರ್ಗಧರ್ಸನ ಮಾಡಿದವರು ಎಂದರು. 

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೆರಾ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ, ಬಂಟ್ವಾಳ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರ, ಸದಸ್ಯೆ ಮಲ್ಲಿಕಾ ಶೆಟ್ಟಿ, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಸಜೀಪಮೂಡ ಗ್ರಾಪ ಅಧ್ಯಕ್ಷ ಗಣಪತಿ ಭಟ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್, ಸಜೀಪಮೂಡಬ್ರಹ್ಮಶ್ರೀ ನಾರಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ಯಶವಂತ ದೇರಾಜೆ, ಯುವ ವಾಹಿನಿ ಅಧ್ಯಕ್ಷ ಲೋಕೇಶ ಸುವರ್ಣ, ಕೆಡಿಪಿ ಸದಸ್ಯೆ ಜಯಂತಿ, ಇರಾ ಗ್ರಾ.ಪಂ ಅಧ್ಯಕ್ಷ ಅಬ್ದುಲ್ ರಝಾಕ್, ಗೇರು ಅಭಿವೃದ್ಧಿ ನಿಗಮದ ಸದಸ್ಯ ಜಗದೀಶ್ ಕೊೈಲ, ಮಹಿಳಾ ಸಮಿತಿ ಅಧ್ಯಕ್ಷೆ ಶಾರದ ಉಪಸ್ಥಿತರಿದ್ದರು.
ತಹಶಿಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿ, ಪ್ರಸ್ತಾವಿಸಿದರು, ಕಂದಾಯ ನಿರೀಕ್ಷಕ ರಾಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News