ಮಂಗಳೂರು ಚಲೋ ಬೈಕ್ ರ್ಯಾಲಿಗೆ ತಡೆ: ಸಂಸದ ನಳಿನ್-ಪೊಲೀಸರ ನಡುವೆ ವಾಗ್ವಾದ

Update: 2017-09-07 04:40 GMT

ಮಂಗಳೂರು, ಸೆ. 7: ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ನಡೆಸದಂತೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗು ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಜ್ಯೋತಿ ಸರ್ಕಲ್ ನಿಂದ ಬೈಕ್ ರ್ಯಾಲಿ ನಡೆಸದಂತೆ ಪೊಲೀಸರು ತಡೆದಿದ್ದಾರೆ. ಇದರಿಂದ ಕೆರಳಿದ ಸಂಸದ ನಳಿನ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಹೊರ ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು ದ.ಕ.ಜಿಲ್ಲೆಗೆ ಪ್ರವೇಶಿಸಿದ್ದು, ಹಾಸನದ ಅರಸೀಕೆರೆಯಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸರ್ಪಗಾವಲು ಏರ್ಪಡಿಸಲಾಗಿದ್ದು, ಯಾವುದೇ ದ್ವಿಚಕ್ರ ವಾಹನಗಳು ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. 

ಈಗಾಗಲೇ ಜಿಲ್ಲಾಧಿಕಾರಿ ಕಚೇರಿಗೆ ಆರ್ ಎಎಫ್ ಸಿಬ್ಬಂದಿ ಆಗಮಿಸಿದ್ದು, ಕಚೇರಿ ಪ್ರವೇಶ ದ್ವಾರದ ಬಳಿ ಬಿಗಿ ಪೊಲೀಸ್  ಬಂದೋಬಸ್ತ್ ಏರ್ಪಡಿಸಲಾಗಿದೆ. ವಾಹನ ಪ್ರವೇಶಿಸದಂತೆ ಬ್ಯಾರಿಕೇಡ್ ಮೂಲಕ ತಡೆ ನಿರ್ಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News