ಕೊಯ್ಲ: ವಿಷ ಸೇವಿಸಿ ಗ್ರಾಪಂ ಸದಸ್ಯ ಆತ್ಮಹತ್ಯೆ
Update: 2017-09-10 06:10 GMT
ಕಡಬ, ಸೆ.10: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೊಯ್ಲ ಗ್ರಾಮ ಪಂಚಾಯತ್ ಸದಸ್ಯ ನಾಗೇಶ್ ಕುಂಬಾರ(30) ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.
ನಾಗೇಶ್ ಅವರ ಆತ್ಮಹತ್ಯೆಗೆ ಸಾಲಬಾಧೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿದ್ದ ನಾಗೇಶ್ ಕುಂಬಾರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.